ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದ ನೆಚ್ಚಿನ ಹಿರಿಯ ನಟ ಅನಂತ್ ನಾಗ್ ಅವರಿಗೆ ಸಿನಿಮಾ ರಂಗದ ಅತ್ಯುನ್ನತ ಪ್ರಶಸ್ತಿಯಾದ ʼದಾದಾಸಾಹೇಬ್ ಫಾಲ್ಕೆʼಯನ್ನು ನೀಡಿ ಗೌರವಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅನಂತ್ ನಾಗ್ ಅವರ ಪ್ರತಿಯೊಬ್ಬ ಅಭಿಮಾನಿಯೂ ಅವರು ಪ್ರಶಸ್ತಿ ಸ್ವೀಕರಿಸುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿಕೊಂಡಿದ್ದಾರೆ. ನಮ್ಮ ಸ್ಯಾಂಡಲ್‌ವುಡ್ ಹಾಗೂ ಕನ್ನಡಿಗರಿಗೆ ಇದು ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ. ನಾನು ಕೂಡ ಅನಂತ್ ಸರ್ ಅಭಿಮಾನಿ, ಅವರು ಪ್ರಶಸ್ತಿ ಪಡೆದ ಕ್ಷಣ ನನ್ನ ಮನಸ್ಸು ತುಂಬಿಬಂತು ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಪೋಸ್ಟ್ ಮಾಡಿದ್ದಾರೆ.
ಸಾಮಾಜಿಕ ಜಾಲತಾಣವಾದ ಟ್ವಿಟರ್ ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ಗೌರವಾನ್ವಿತ ರಾಷ್ಟ್ರಪತಿಗಳಿಂದ ಸಿನಿಮಾ ರಂಗದ ಅತ್ಯುನ್ನತ ಪ್ರಶಸ್ತಿಯಾದ “ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಿದ್ದು” ಪ್ರತಿಯೊಬ್ಬ ಅಭಿಮಾನಿಗೂ ಸಂತೋಷ ಮನತುಂಬಿ ಬರುವಂತಹ ಕ್ಷಣ ಎಂದು ಹೇಳಿದ್ದಾರೆ. ಚಿಕ್ಕ ವಯಸ್ಸಿನಿಂದಲೂ ಅನಂತ್ ನಾಗ್ ಅವರನ್ನು ಟಿವಿಯಲ್ಲಿ ನೋಡುತ್ತಾ ಬೆಳೆದು ಬಂದಿದ್ದೇನೆ. ನನ್ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾದಲ್ಲಿ ಅನಂತ್ ನಾಗ್ ಅವರು ಅಭಿನಯ ಮಾಡಿದ್ದರು. ಅವರನ್ನು ನಿರ್ದೇಶಿಸುವ ಭಾಗ್ಯ ಸಿಕ್ಕಿತ್ತು. ಅನಂತ್ ಸರ್ ನಾನು ಸದಾ ನಿಮ್ಮ ಅಭಿಮಾನಿ. ಮನಸ್ಸು ತುಂಬಿದೆ, ಖುಷಿಯ ಕ್ಷಣಗಳನ್ನು ಸದಾ ಜೊತೆಗೆ ಇಟ್ಟುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ನನ್ನ ಜನ್ಮಭೂಮಿ, ಕರ್ಮಭೂಮಿ ಹಾಗೂ ಧರ್ಮಭೂಮಿಗೆ ನಮಿಸುತ್ತೇನೆ. ಈ ಪ್ರಶಸ್ತಿ ನನ್ನ ಕೈಸೇರೋದಕ್ಕೆ ಕನ್ನಡಿಗರೇ ಕಾರಣ. ನನ್ನನ್ನು ಪ್ರೀತಿಸಿ, ಬೆಳೆಸಿದ ಕನ್ನಡದ ಅಭಿಮಾನಿಗಳಿಗೆ, ಚಿತ್ರರಂಗದ ತಂತ್ರಜ್ಞರಿಗೆ ಹಾಗೂ ನಿರ್ದೇಶಕರಿಗೆ ಈ ಗೌರವವನ್ನು ಅರ್ಪಿಸುತ್ತೇನೆ. ಕಳೆದ ವರ್ಷ ದ್ರೌಪದಿ ಮುರ್ಮು ಅವರಿಂದ ಪದ್ಮಭೂಷಣ ಪ್ರಶಸ್ತಿ ಪಡೆದುಕೊಂಡೆ. ಈ ವರ್ಷ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಂದಿದೆ. ಇದು ಹೆಮ್ಮೆಯ ಹಾಗೂ ಸಂತಸದ ವಿಷಯ ಎಂದು ಅನಂತ್‌ನಾಗ್ ಹೇಳಿದ್ದಾರೆ



