Monday, August 15, 2022

Latest Posts

ಅನಂತ್’ನಾಗ್ ನಲ್ಲಿ ಎನ್’ಕೌಂಟರ್: ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.
ಜಿಲ್ಲೆಯ ವೈಲೂರಿನಲ್ಲಿ ಉಗ್ರರು ಅಡಗಿರುವುದರ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ, ಇಂದು ಬೆಳಗ್ಗೆ ಎನ್ ಕೌಂಟರ್ ಆರಂಭಿಸಿತು. ಈ ವೇಳೆ ಮೂವರು ಉಗ್ರರನ್ನು ಸದೆಬಡಿಯಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಎನ್ ಕೌಂಟರ್ ನಡೆದ ಸ್ಥಳದಲ್ಲಿ ಶೋಧ ಕಾರ್ಯ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss