ನಿರೂಪಕಿ ಅನುಶ್ರೀಗೆ ಕೊನೆಗೂ ಕೂಡಿಬಂತು ಕಂಕಣ ಭಾಗ್ಯ! ಹುಡುಗ ಯಾರು ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕನ್ನಡದ ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಶ್ರೀ ಅವರು ಕೊನೆಗೂ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಹಲವು ವರ್ಷಗಳಿಂದ “ಅನುಶ್ರೀ ಮದುವೆ ಯಾವಾಗ?” ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದ್ದು, ಅಭಿಮಾನಿಗಳಿಗೆ ಖುಷಿಯೋ ಖುಷಿಯಲ್ಲಿದ್ದಾರೆ.

ಕಳೆದ ಕೆಲ ದಿನಗಳಿಂದ ನಿರೂಪಕಿ ಹಾಗೂ ನಟಿ ಅನುಶ್ರೀ ಅವರ ಮದುವೆ ಬಗ್ಗೆ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಗುಸುಗುಸು ಕೇಳಿಬರುತ್ತಿದ್ದಿದ್ದು, ಈಗ ಆ ಸುದ್ದಿ ನಿಜವಾಗಿದ್ದು ಅವರ ಕುಟುಂಬದ ಮೂಲಗಳಿಂದ ಖಚಿತತೆ ಪಡೆಯಲಾಗಿದೆ.

ಅನುಶ್ರೀ ಅವರು ಕೊಡಗು ಮೂಲದ ಉದ್ಯಮಿ ರೋಷನ್ ಎಂಬವರೊಂದಿಗೆ ಆಗಸ್ಟ್ 28ರಂದು ಮದುವೆಯಾಗಲಿದ್ದಾರೆ. ಸಂಪೂರ್ಣವಾಗಿ ಕುಟುಂಬಗಳ ಒಪ್ಪಿಗೆಯೊಂದಿಗೆ ನಡೆಯುತ್ತಿರುವ ಈ ಮದುವೆ ಅರೇಂಜ್ಡ್ ಮ್ಯಾರೇಜ್ ಆಗಿದ್ದು, ಇಬ್ಬರ ಮನೆಗಳಲ್ಲಿ ಈಗಾಗಲೇ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.

ʼಸರಿಗಮಪʼ ಸೇರಿದಂತೆ ಅನೇಕ ಕಾರ್ಯಕ್ರಮಗಳ ಮುಖವಾಗಿದ್ದ ಅನುಶ್ರೀ, ತಮ್ಮ ವಿಶಿಷ್ಟ ಶೈಲಿಯ ನಿರೂಪಣೆಯಿಂದ ಸಾವಿರಾರು ಅಭಿಮಾನಿಗಳನ್ನು ಗಳಿಸಿದ್ದಾರೆ. ಈಗ ತಮ್ಮ ವೈಯಕ್ತಿಕ ಜೀವನದ ಹೊಸ ಅಧ್ಯಾಯವನ್ನು ಆರಂಭಿಸುತ್ತಿರುವ ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Logged in as Ashika HD. Log out?

Please enter your comment!

error: Content is protected !!