ಅಂತೂ ನಮ್ಮವ್ರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗೆದ್ಬಿಟ್ರು.. Home Ground ಕಂಟಕ ಕಳಿತು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಮೂರು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಗೂ ತನ್ನ ತವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಆವೃತ್ತಿಯ ಮೊದಲ ಗೆಲುವು ದಾಖಲಿಸಿದೆ. ಜೊತೆಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಏರಿದೆ.

ಗುರುವಾರ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ 11 ರನ್ ಗಳ ಗೆಲುವು ಬೆಂಗಳೂರು ತಂಡ ಸಾಧಿಸಿದೆ. ಈ ಮೂಲಕ ಆಡಿರುವ ಒಂಬತ್ತು ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ.

ಗೆಲುವಿಗೆ 206 ರನ್ ಗಳ ಕಠಿಣ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳು ಮುಗಿದಾಗ 9 ವಿಕೆಟ್ ನಷ್ಟಕ್ಕೆ ಕೇವಲ 194 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು.

ಜೋಶ್‌ ಹೇಜಲ್ವುಡ್‌ ಅಂತಿಮ ಓವರ್‌ನಲ್ಲಿ 33 ರನ್ ಗಳಿಗೆ 4 ವಿಕೆಟ್ ಕಬಳಿಸಿದರು. ಕೃನಾಲ್ ಪಾಂಡ್ಯ 2 ವಿಕೆಟ್, ಭುವನೇಶ್ವರ್ ಕುಮಾರ್, ಯಶ್ ದಯಾಳ್ ತಲಾ 1 ವಿಕೆಟ್ ಗಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!