ಪ್ರಧಾನಿ ಮೋದಿ ಭೇಟಿಯಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ವೇಳೆ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು.

ಪ್ರಧಾನ ಮಂತ್ರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬದಲಾಗಿ ಹೆಚ್ಚಿನ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿದರು. ರಾಜ್ಯದ ಅಭಿವೃದ್ಧಿಗೆ ಹಲವು ಮಹತ್ವದ ಪ್ರಸ್ತಾವನೆಗಳನ್ನು ಪ್ರಧಾನಿ ಮೋದಿ ಮುಂದಿಟ್ಟು ಕೇಂದ್ರ ಸರ್ಕಾರದ ಬೆಂಬಲವನ್ನು ಕೋರಿದರು ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಆಂಧ್ರಪ್ರದೇಶವು ಬಲಿಷ್ಠ ರಾಜ್ಯವಾಗಿ ಮತ್ತೆ ಹೊರಹೊಮ್ಮಲಿದೆ ಎನ್ನುವ ವಿಶ್ವಾಸವನ್ನು ಸಭೆಯ ಬಳಿಕ ಬಾಬು ಅವರ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಜೊತೆ ರಚನಾತ್ಮಕ ಸಭೆ ನಡೆಸಿದ್ದೇನೆ. ಆಂಧ್ರಪ್ರದೇಶದ ಅಭಿವೃದ್ಧಿ ಹಾಗೂ ಕಲ್ಯಾಣದ ಬಗ್ಗೆ ಪ್ರಮುಖ ಚರ್ಚೆಗಳು ನಡೆಯಿತು. ಮೋದಿ ಅವರ ನಾಯಕತ್ವದಲ್ಲಿ ಆಂಧ್ರಪ್ರದೇಶ ಮತ್ತೆ ಶಕ್ತಿಶಾಲಿ ಹೊರಹೊಮ್ಮಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ನಾರಾ ಚಂದ್ರಬಾಬು ನಾಯ್ಡು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದೆಹಲಿ ಪ್ರವಾಸದಲ್ಲಿ ಹಲವು ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಕೃಷಿ ಸಚಿವ ಶಿವರಾಜ್​ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ್ದಾರೆ.

ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರೋಗ್ಯ ಸಚಿವ ಜೆಪಿ ನಡ್ಡಾ ಅವರೊಂದಿಗಿನ ಸಭೆಗಳು ನಾಯ್ಡು ಅವರ ಕಾರ್ಯಸೂಚಿಯಲ್ಲಿವೆ ಎಂದು ಮೂಲಗಳು ಸೂಚಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!