ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ರಾಮಮೂರ್ತಿ ವಿಧಿವಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರ ಕಿರಿಯ ಸಹೋದರ ರಾಮಮೂರ್ತಿ ನಾಯ್ಡು (72) ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹೃದಯ-ಉಸಿರಾಟದ ಸಮಸ್ಯೆಯಿಂದಾಗಿ ರಾಮಮೂರ್ತಿ ನಾಯ್ಡು ಅವರನ್ನು ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿದ್ದರು.

ರಾಮಮೂರ್ತಿ ನಾಯ್ಡು ಅವರು 1994 ರ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಚುನಾವಣೆಯಲ್ಲಿ ಚಂದ್ರಗಿರಿ ಕ್ಷೇತ್ರದಿಂದ ಗೆದ್ದ ನಂತರ ಆಂಧ್ರಪ್ರದೇಶ ವಿಧಾನಸಭೆಗೆ ಆಯ್ಕೆಯಾಗಿದ್ದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!