ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಗರಾಜ್ನಲ್ಲಿ ಮಹಾಕುಂಭಮೇಳದ ಪವಿತ್ರ ಸ್ನಾನ (Holy Dip) ಮುಂದುವರೆದಿದೆ. ದೇಶ ವಿದೇಶಗಳ ಖ್ಯಾತ ಉದ್ಯಮಿಗಳು, ರಾಜಕಾರಣಿಗಳು, ಕಲಾವಿದರು, ನಟ ನಟಿಯರು, ಕ್ರೀಡಾ ತಾರೆಯರು, ರಾಜಕಾರಣಿಗಳು, ಅಘೋರಿಗಳು, ನಾಗಾಸಾಧುಗಳು, ಸಾಧು ಸಂತರು, ಮಠಾಧಿಪತಿಗಳು, ಜನಸಾಮಾನ್ಯರು ಸೇರಿದಂತೆ ಸುಮಾರು 50 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ಪುಣ್ಯಸ್ನಾನ ಮಾಡಿದ್ದಾರೆ. ಇದೀಗ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ, ಟಾಲಿವುಡ್ ನಟ ಪವನ್ ಕಲ್ಯಾಣ್ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ.
ಸಾಯಂಕಾಲ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ಮ್ ಕಲ್ಯಾಣ್ ಅವರು ತಮ್ಮ ಪತ್ನಿ ರಷ್ಯಾ ಮೂಲದ ಆ್ಯನಾ ಲೆಜ್ನೀವಾ ಹಾಗೂ ಮಗ ಅಕಿರಾ ನಂದನ್ ಜೊತೆ ಕುಂಭಮೇಳದಲ್ಲಿ ಭಾಗಿಯಾಗಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.
ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಗಂಗಾನದಿಯಲ್ಲಿ ಪವನ್ ಕಲ್ಯಾಣ್ ಅವರು ಪೂಜೆ ಮಾಡಿ, ಪಾರ್ಥನೆ ಸಲ್ಲಿಸಿದ್ದಾರೆ.