ಸಿದ್ದರಾಮಯ್ಯ ಭೇಟಿಗೆ ಬಂದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ವಾಹನದಲ್ಲಿ ಹೆಬ್ಬಾವು ಪ್ರತ್ಯಕ್ಷ!

ಹೊಸದಿಗಂತ ಡಿಜಿಟಲ್ ಡೆಸ್ಕ್; 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಆಗಮಿಸಿದ ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ , ನಟ ಪವನ್ ಕಲ್ಯಾಣ್ ಅವರ ಬೆಂಗಾವಲು ಪಡೆಯ ವಾಹನದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.

ಕಾಡು ಪ್ರಾಣಿಗಳ ಹಾವಳಿ, ನಿಯಂತ್ರಣ ಮತ್ತು ಆನೆ ಕಾರ್ಯಾಚರಣೆ ಕುರಿತು ನಿಗದಿಯಾಗಿರುವ ಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಆಗಮಿಸಿದ್ದ ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಸಭೆ ಮುಗಿಸಿ ವಾಪಸ್ ಹೋಗುವಾಗ ಬೆಂಗಾವಲು ವಾಹನದಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ. ಇದರಿಂದ ಆತಂಕಕ್ಕೆ ಒಳಗಾದ ಬೆಂಗಾವಲು ಪಡೆ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ವಾಹನ ಪರಿಶೀಲನೆ ಮಾಡಿದ ಉರಗ ರಕ್ಷಣಾ ತಂಡದ ಸದಸ್ಯರು ಹಾವನ್ನು ರಕ್ಷಣೆ ಮಾಡಿದ್ದಾರೆ.

ಈ ಸಭೆಯ ಬಳಿಕ ಅರಣ್ಯ ಇಲಾಖೆಗೆ ಭೇಟಿ ನೀಡಿದ್ದ ಪವನ್ ಕಲ್ಯಾಣ್ ಅವರ ವಾಹನದಲ್ಲಿ ಹೆಬ್ಬಾವು ಸೇರಿಕೊಂಡಿದೆ. ಇನ್ನೇನು ಆಂಧ್ರ ಪ್ರದೇಶಕ್ಕೆ ಹೊರಡಲು ಸಿದ್ಧರಾಗಬೇಕು ಎನ್ನುವಷ್ಟರಲ್ಲಿ ಬೆಂಗಾಲವು ಪಡೆಯ ಮುಂಬದಿಯ ಬಾನೆಟ್‌ನಲ್ಲಿ ಹೆಬ್ಬಾವಿನ ತಲೆ ಕಂಡುಬಂದಿದೆ. ಕೂಡಲೇ, ಹೆಬ್ಬಾವಿನ ರಕ್ಷಣೆಗೆ ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ತುಸು ಹೊತ್ತು ಪರದಾಡಿದ್ದಾರೆ.ಕೊನೆಗೆ ಹಾವನ್ನು ರಕ್ಷಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!