ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಬಾಂಗ್ಲಾದೇಶದಲ್ಲಿ ಧಾರ್ಮಿಕ ಮುಖಂಡ ಮತ್ತು ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ, ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ನೇತೃತ್ವದ ಹಂಗಾಮಿ ಬಾಂಗ್ಲಾ ಸರ್ಕಾರವು ಹಿಂದೂಗಳ ಮೇಲಿನ ದೌರ್ಜನ್ಯವನ್ನು ನಿಲ್ಲಿಸುವಂತೆ ಒತ್ತಾಯಿಸಿದರು.
ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡ ರೀತಿಯಿಂದ ಅವರು ತೀವ್ರವಾಗಿ ವಿಚಲಿತರಾಗಿದ್ದಾರೆ, ಬಾಂಗ್ಲಾದೇಶದ ರಚನೆಗಾಗಿ ಭಾರತೀಯ ಸೇನೆಯು ತಮ್ಮ ರಕ್ತವನ್ನು ಚೆಲ್ಲಿದೆ ಎಂದು ಹೇಳಿದರು. ಈ ವಿಚಾರದಲ್ಲಿ ವಿಶ್ವಸಂಸ್ಥೆ ಮತ್ತು ಭಾರತ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಅವರು ಮನವಿ ಮಾಡಿದರು.
“ಇಸ್ಕಾನ್ ಬಾಂಗ್ಲಾದೇಶದ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ಬಾಂಗ್ಲಾದೇಶ ಪೊಲೀಸರು ಬಂಧಿಸಿರುವುದನ್ನು ಖಂಡಿಸಲು ನಾವೆಲ್ಲರೂ ಒಂದಾಗೋಣ. ಹಿಂದೂಗಳ ಮೇಲಿನ ದೌರ್ಜನ್ಯವನ್ನು ನಿಲ್ಲಿಸುವಂತೆ ನಾವು ಶ್ರೀ ಮೊಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶ ಸರ್ಕಾರವನ್ನು ಒತ್ತಾಯಿಸುತ್ತೇವೆ ಮತ್ತು ಮನವಿ ಮಾಡುತ್ತೇವೆ. ಬಾಂಗ್ಲಾದೇಶದ ರಚನೆಗಾಗಿ ನಮ್ಮ ಸೇನಾ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ, ನಮ್ಮ ಹೋಇ ಹಿಂದು ಸಹೋದರ ಸಹೋದರಿಯರನ್ನು ಗುರಿಯಾಗಿಸಲಾಗುತ್ತಿದೆ” ಎಂದು ಆಂಧ್ರ ಉಪಮುಖ್ಯಮಂತ್ರಿ ಕಿಡಿಕಾರಿದ್ದಾರೆ.