ಸಾರ್ವಜನಿಕ ಸಭೆ, ರ‍್ಯಾಲಿ ನಿಷೇಧಿಸಿದ ಆಂಧ್ರ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ರ‍್ಯಾಲಿಯಲ್ಲಿ ನೂಕುನುಗ್ಗಲಾಗಿ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಆಂಧ್ರ ಸರ್ಕಾರ ಹೆದ್ದಾರಿ ಸೇರಿದಂತೆ ರಸ್ತೆಗಳಲ್ಲಿ ಸಾರ್ವಜನಿಕ ಸಭೆ ಹಾಗೂ ರ‍್ಯಾಲಿ ನಡೆಸುವುದಕ್ಕೆ ನಿಷೇಧ ಹೇರಿದೆ.

ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರಕ್ಕೆ ಬರಲಾಗಿದೆ. ತುರ್ತು ಸೇವೆ, ಅಗತ್ಯ ವಸ್ತುಗಳ ಚಲನೆಗೆ ಅಡ್ಡಿಯಾಗದ ರೀತಿ ಸಭೆ ನಡೆಸಬೇಕಿದೆ ಎಂದು ರಾಜ್ಯ ಗೃಹ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್ ಗುಪ್ತಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!