ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಜೆ.ಶಾಂತಾ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಈ ಮೂಲಕ ಕರ್ನಾಟಕ ರಾಜಕಾರಣಕ್ಕೆ ಗುಡ್ ಬೈ ಹೇಳಿರುವ ಅವರು, ಆಂಧ್ರ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ.
ಅನಂತಪುರ ಜಿಲ್ಲೆಯ ಗುಂತಕಲ್ ಪಟ್ಟಣದ ನಿವಾಸಿ ಶಾಂತಾ, 2009ರಲ್ಲಿ ಬಿಜೆಪಿ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಿದ್ದರು.
ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿಯಿಂದ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಹನುಮಂತಪ್ಪ ವಿರುದ್ಧ ಗೆಲುವು ಸಾಧಿಸಿದ್ದರು. 2018ರ ಉಪ ಚುನಾವಣೆಯಲ್ಲಿ ಮತ್ತೆ ಲೋಕಸಭೆಗೆ ಬಿಜೆಪಿಯಿಂದ ಅಖಾಡಕ್ಕಿಳಿದಿದ್ದ ಅವರು, ಕಾಂಗ್ರೆಸ್‌ನ ವಿ.ಎಸ್. ಉಗ್ರಪ್ಪ ವಿರುದ್ಧ ಭಾರೀ ಅಂತರದಲ್ಲಿ ಸೋಲುಂಡಿದ್ದರು.
ಇದೀಗ ಶಾಂತಾ, ವಿಜಯವಾಡ ತಾಡಿಪಲ್ಲಿ ಸಿಎಂ ಕ್ಯಾಂಪ್ ಕಚೇರಿಯಲ್ಲಿ ಆಂಧ್ರ ಸಿಎಂ ಜಗನ್‌ಮೋಹನ್ ರೆಡ್ಡಿ ನೇತೃತ್ವದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಿಂದುಪುರ ಕ್ಷೇತ್ರದಿಂದ ವೈಎಸ್‌ಆರ್ ಪಕ್ಷದ ಮೂಲಕ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.