ಆಂಧ್ರಪ್ರದೇಶದಲ್ಲಿ ಲಾರಿಗಳ ನಡುವೆ ಭೀಕರ ಡಿಕ್ಕಿ: ಐವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ-16 ರಲ್ಲಿ ವೇಗವಾಗಿ ಬಂದ ಲಾರಿಯೊಂದು ರಸ್ತೆ ವಿಭಜಕವನ್ನು ದಾಟಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ.
ಗುರುವಾರ ಮಧ್ಯರಾತ್ರಿಯ ನಂತರ ಪ್ರತಿಪಾಡು ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡು ಲಾರಿಗಳ ಚಾಲಕರು ಮತ್ತು ಕ್ಲೀನರ್ ಸ್ಥಳದಲ್ಲೇ ಸಜೀವ ದಹನಗೊಂಡರು, ಒಂದು ಕ್ಯಾಬಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಮತ್ತೊಬ್ಬ ವ್ಯಕ್ತಿ ಸುಟ್ಟಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಎರಡು ಲಾರಿಗಳು ಸುಟ್ಟು ಕರಕಲಾಗಿವೆ. ಅತಿವೇಗವೇ ಅಪಘಾತಕ್ಕೆ ಪ್ರಾಥಮಿಕ ಕಾರಣ ಎಂದು ಅವರು ಹೇಳಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!