ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿಯ ಶ್ರೀಕೃಷ್ಣ ಮಠಕ್ಕೆ ನಟ, ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಭೇಟಿ ನೀಡಿ, ಶ್ರೀ ಕೃಷ್ಣನ ದರುಶನ ಪಡೆದರು.
ಲಕ್ಷಕಂಠ ಗೀತಾ ಪಾರಾಯಣ ಸಮರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ ಅವರನ್ನು ಪರ್ಯಾಯ ಪುತ್ತಿಗೆ ಸುಗುಣೇಂದ್ರ ಶ್ರೀಗಳು ಸ್ವಾಗತಿಸಿದರು.
ಬಳಿಕ ರಾಜಾಂಗಣದಲ್ಲಿ ನಡೆಯಲಿರುವ ಪರ್ಯಾಯ ಶ್ರೀ ಪುತ್ತಿಗೆ ಮಠದ ಆಯೋಜನೆಯ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗಿಯಾದರು.

