ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಾಲಂವರಿಪಲ್ಲಿ ಗ್ರಾಮದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದು ಮೂವರು ಮೃತಪಟ್ಟಿದ್ದಾರೆ
ಮೃತರನ್ನು ಕರ್ನಾಟಕದ ಚಿಂತಾಮಣಿ ಬಳಿಯ ಲೋಕೇಶ್, ಚಲಪತಿ ಮತ್ತು ಶಿವಣ್ಣ ಎಂದು ಗುರುತಿಸಲಾಗಿದೆ.
ಶನಿವಾರ ತಮಿಳುನಾಡಿನ ಹೊಸೂರಿನಲ್ಲಿ ನಡೆದ ಮದುವೆಯಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ ಬಾಲಂವರಿಪಲ್ಲಿಯಲ್ಲಿ ಕಾರು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದು ಈ ಘಟನೆ ನಡೆದಿದೆ.
ಕಾರಿನಲ್ಲಿದ್ದ ಐದು ಪ್ರಯಾಣಿಕರಲ್ಲಿ ಕರ್ನಾಟಕದ ಮೂವರು ಮೃತಪಟ್ಟಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಕ್ರೇನ್ ಮೂಲಕ ಕಾರನ್ನು ಬಾವಿಯಿಂದ ಹೊರತೆಗೆದರು. ಘಟನೆಯ ಕುರಿತು ಪಿಲೇರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.