ಮೀನು ಸಾಗಾಟದ ಟ್ರಕ್‌ ಪಲ್ಟಿ: 4 ಮಂದಿ ಸಾವು, 10 ಜನರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೀನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್‌ ಮಗುಚಿ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡ್ಡೆಂನಲ್ಲಿ ನಡೆದಿದೆ.
ಇಂದು ಮುಂಜಾನೆ ತಡೆಪಲ್ಲಿದುಡ್ಡೆಂನಲ್ಲಿ ಮೀನು ತುಂಬಿಕೊಂಡು ಸಾಗುತ್ತಿದ್ದ ಟ್ರಕ್‌ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಟ್ರಕ್‌ ಚಾಲಕನ ನಿಯಂತ್ರಣಕ್ಕೆ ಸಿಗದೆ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!