ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋವಿಡ್ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ.
ಆಂಧ್ರ ಪ್ರದೇಶದಲ್ಲಿ ಒಂದೇ ದಿನ 19 ಪಾಸಿಟಿವ್ ಕೇಸ್ ದಾಖಲಾಗಿದೆ. ನೆರೆ ರಾಜ್ಯ ಕೇರಳ ಒಂದರಲ್ಲೇ 186 ಕೇಸ್ ಇದ್ದು 95 ಸಕ್ರಿಯ ಪ್ರಕರಣಗಳಾಗಿವೆ.