ಹೊಸದಿಗಂತ ವರದಿ,ನಾಗಮಂಗಲ:
ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭಾನುವಾರ ಬೆಳಿಗ್ಗೆ ಭೇಟಿ ಕೊಟ್ಟ ಆಂದ್ರಪ್ರದೇಶದ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಅವರು ಶ್ರೀಮಠದ ಶ್ರೀ ಕಾಲಭೈರವೇಶ್ವರ ಸ್ವಾಮಿ ಸೇರಿದಂತೆ ಕ್ಷೇತ್ರಾಧಿದೇವತೆಗಳಿಗೆ ಹಾಗೂ ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಪೀಠಾಧ್ಯಕ್ಷ ನಿರ್ಮಲಾನಂದನಾಥಶ್ರೀಗಳ ಆಶೀರ್ವಾದ ಪಡೆದುಕೊಂಡರು.
ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಆಂದ್ರಪ್ರದೇಶದ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಅವರನ್ನು ಶ್ರೀ ಮಠದ ಸಂಪ್ರದಾಯದಂತೆ ಸ್ವಾಗತಕೋರಿ ಬರಮಾಡಿಕೊಳ್ಳಲಾಯಿತು. ಬಳಿಕ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲವಲದಲ್ಲಿ ನಡೆದ ವಿಶೇಷ ಪೂಜಾ ಕಾರ್ಯದಲ್ಲಿ ಪಾಲ್ಗೊಂಡ ಅವರು, ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ಮಹಾಗದ್ದುಗೆಗೆ ಪೂಜೆ ಸಲ್ಲಿಸಿದರು.
ನಂತರ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಶ್ರೀಗಳೊಂದಿಗೆ ಕೆಲ ಹೊತ್ತು ಸಮಾಲೋಚನೆ ನಡೆಸಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು.