ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ, ವೈದ್ಯಕೀಯ ಕಾರಣಗಳಿಗಾಗಿ ಜೈಲಿನಿಂದ ಹೊರಬಂದು ಚಿಕಿತ್ಸೆ ಪಡೆಯುತ್ತಿರುವ ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.
ಅನಾರೋಗ್ಯ ಹಿನ್ನೆಲೆ ಬಾಬು ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿ ಇದೇ 28ಕ್ಕೆ ಮುಗಿಯಲಿದ್ದು, ಅವರು ಮತ್ತೆ ಜೈಲಿಗೆ ಹೋಗುವುದು ತಪ್ಪಿದಂತಾಗಿದೆ.
ಸ್ಕಿಲ್ ಡೆವಲಪ್ಮೆಂಟ್ ಪ್ರಕರಣದಲ್ಲಿ ಆರೋಪಿಯಾಗಿರುವ ಚಂದ್ರಬಾಬು ಅವರನ್ನು ಸೆಪ್ಟೆಂಬರ್ 9ರಂದು ಅರೆಸ್ಟ್ ಮಾಡಲಾಗಿತ್ತು. ಬಳಿಕ ಅವರನ್ನು ರಾಜಮಂಡ್ರಿ ಸೆಂಟ್ರಲ್ ಜೈಲಿನಲ್ಲಿ ಇಡಲಾಗಿತ್ತು.