ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾ ಸೇನೆ ನಡೆಸುತ್ತಿರುವ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಆಂಧ್ರಪ್ರದೇಶ ಸರ್ಕಾರ ಸಹಾಯವಾಣಿ ಆರಂಭಿಸಿದೆ.
ಆಂಧ್ರಪ್ರದೇಶ ಅನಿವಾಸಿ ತೆಲುಗು ಸಮಾಜದ ನೆರವಿನಿಂದ ವಿಜಯವಾಡ ಮತ್ತು ದೆಹಲಿಯಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ತೆಲುಗು ನಿವಾಸಿಗಳು ಸುರಕ್ಷತೆಯನ್ನು ಖಾತ್ರಿಪಡಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆಂಧ್ರ ಸರ್ಕಾರ ಹೇಳಿದೆ.
ವಿದ್ಯಾರ್ಥಿಗಳು, ನಾಗರಿಕರು ಮತ್ತು ಅವರ ಕುಟುಂಬದವರು ದೆಹಲಿಯಲ್ಲಿರುವ ಆಂಧ್ರ ಪ್ರದೇಶ ಭವನ ಮತ್ತು ವಿಜಯವಾಡದಲ್ಲಿ ತೆರೆಯಲಾಗಿರುವ ಸಹಾಯವಾಣಿ ಕೇಂದ್ರ ಸಂಪರ್ಕಿಸಬಹುದಾಗಿದೆ.