ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಕೈಯಲ್ಲೆ ಶೌಚಾಲಯ ತೊಳೆಸಿದ ಮುಖ್ಯಶಿಕ್ಷಕಿಯನ್ನು ಅರೆಸ್ಟ್ ಮಾಡಲಾಗಿದೆ.
ಬಿಇಒ ಆಂಜಿನಪ್ಪ ನೀಡಿದ ದೂರಿನ ಅನ್ವಯ ಹೆಚ್‌ಎಂ ಲಕ್ಷ್ಮೀದೇವಮ್ಮ ಅವರನ್ನು ಬ್ಯಾಡರಳ್ಳಿ ಪೊಲೀಸರು ಬಂಧಿಸಿದ್ದಾರೆ. ಇಂದು ವಿಚಾರಣೆ ನಡೆಯಲಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ.
ಶಾಲಾ ಅವಧಿಯಲ್ಲಿ ಮಕ್ಕಳಿಂದ ಬರೀಕೈಯಲ್ಲಿ ಶೌಚಾಲಯ ತೊಳೆಸಲಾಗಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಪೋಷಕರು ಶಾಲೆಯ ಹೊರಗೆ ಪ್ರತಿಭಟನೆ ನಡೆಸಿದ್ದರು.