Tuesday, March 21, 2023

Latest Posts

ನಾಳೆ ಜಾಗತಿಕ ಹೂಡಿಕೆದಾರರ ಶೃಂಗಸಭೆ : ಕಾರ್ಯಕ್ರಮ ಉದ್ಘಾಟಿಸಲಿರುವ ಸಿಎಂ ಜಗನ್ ಮೋಹನ್ ರೆಡ್ಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಆಂಧ್ರ ಪ್ರದೇಶ ರಾಜ್ಯ ಸರ್ಕಾರವು ಎರಡು ದಿನಗಳ ಜಾಗತಿಕ ಹೂಡಿಕೆದಾರರ ಶೃಂಗಸಭೆ (ಜಿಐಎಸ್), 2023 ಅನ್ನು ವಿಶಾಖಪಟ್ಟಣದಲ್ಲಿ ಮೊದಲ ಬಾರಿಗೆ ಮಾರ್ಚ್ 3 ಮತ್ತು 4 ರಂದು ಆಯೋಜಿಸುತ್ತಿದೆ.

ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ನಾಳೆ ಶೃಂಗಸಭೆಯನ್ನು ಉದ್ಘಾಟಿಸಲಿದ್ದಾರೆ. ಆಂಧ್ರ ಪ್ರದೇಶ ರಾಜ್ಯದಲ್ಲಿನ ಕೈಗಾರಿಕೆಗಳಿಗೆ ಸಂಬಂಧಿಸಿದ ಪ್ರದರ್ಶನವನ್ನು ಜಾಗತಿಕ ಹೂಡಿಕೆದಾರರ ಶೃಂಗಸಭೆ ಸಮಯದಲ್ಲಿ ಪ್ರದರ್ಶಿಸಲಾಗುತ್ತದೆ.

ವಿಶಾಖಪಟ್ಟಣದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆಂಧ್ರಪ್ರದೇಶದ ಕೈಗಾರಿಕಾ ಸಚಿವ ಗುಡಿವಾಡ ಅಮರನಾಥ್, 25 ದೇಶಗಳ ಹೂಡಿಕೆದಾರರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಆಂಧ್ರಪ್ರದೇಶದಲ್ಲಿನ ಹೂಡಿಕೆ ಅವಕಾಶಗಳ ಬಗ್ಗೆ ಜಗತ್ತಿಗೆ ತಿಳಿಸುತ್ತೇವೆ ಎಂದು ಹೇಳಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!