ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರೆಡ್ಡಿ ಅವರು ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿದ್ದರು.

ರೆಡ್ಡಿ ರಾಜೀನಾಮೆ ಕುರಿತು ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸದಸ್ಯ ಮಾಣಿಕಂ ಟ್ಯಾಗೋರ್, ಪಕ್ಷದಿಂದ ಎಲ್ಲವನ್ನೂ ಪಡೆದುಕೊಂಡು ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಅನ್ನು ನಾಶಪಡಿಸಿದವರು ಈಗ ಬಿಜೆಪಿಗಾಗಿ ಕಾಂಗ್ರೆಸ್‌ ತೊರೆಯುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ತಮ್ಮ ರಾಜಿನಾಮೆ ನಿರ್ಧಾರ ಪ್ರಕಟಿಸಿರುವ ಕಿರಣ್‌ ಕುಮಾರ್‌, “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ನೀಡಿರುವ ರಾಜೀನಾಮೆ ಸ್ವೀಕರಿಸಿ” ಎಂದು ಬರೆದಿದ್ದಾರೆ.

ಆಂಧ್ರಪ್ರದೇಶವನ್ನು ವಿಭಜಿಸಿ ತೆಲಂಗಾಣವನ್ನು ರಚಿಸುವ ಅಂದಿನ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ನಿರ್ಧಾರದ ಮೇಲೆ ರೆಡ್ಡಿ ಈ ಹಿಂದೆ 2014 ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!