Tuesday, August 16, 2022

Latest Posts

ಆಂಧ್ರಪ್ರದೇಶದಲ್ಲಿ ಹೆಚ್ಚಿದ ಕೊರೋನಾ: ಮೇ.30ರವರೆಗೆ ಕರ್ಫ್ಯೂ ವಿಸ್ತರಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಆಂಧ್ರಪ್ರದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಮೇ ಅಂತ್ಯದವರೆಗೆ ರಾಜ್ಯಾದ್ಯಂತ ಕರ್ಫ್ಯೂ ವಿಸ್ತರಿಸಲಾಗಿದೆ ಎಂದು ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.
ಬೆಳಗ್ಗೆ 6-12ರವರೆಗೆ ಅಗತ್ಯ ಸೇವೆಗಳಿಗೆ ಅವಕಾಶ ನೀಡಲಾಗಿದ್ದು, ಕರ್ಫ್ಯೂ ಜಾರಿಯಿರುವ ವೇಳೆಯಲ್ಲಿ ಯಾರು ಕೂಡ ಖಾಸಗಿ ವಾಹನಗಳಲ್ಲಿ ಸಂಚಾರ ಮಾಡಬಾರದು ಎಂದರು.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ನಡುವೆ ಬೆಡ್, ಆಕ್ಸಿಜನ್, ಲಸಿಕೆಯ ಕೊರತೆ ಎದುರಾಗಿದೆ. ಈ ಹಿನ್ನೆಲೆ ಸೋಂಕು ನಿಯಂತ್ರಣಕ್ಕೆ ತರುವುದು ಸರ್ಕಾರ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!