ಹೊಸದಿಗಂತ ಡಿಜಿಟಲ್ ಡೆಸ್ಕ್:
ಆನೇಕಲ್ ಪುರಸಭಾ ಸದಸ್ಯನ ಬರ್ಬರ ಹತ್ಯೆ ಮಾಡಿರುವ ಘಟನೆ ಬುಧವಾರ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ಪಟ್ಟಣದ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ.
ಆನೇಕಲ್ ಪುರಸಭೆ ಸದಸ್ಯ ರವಿ ಅಲಿಯಾಸ್ ಸ್ಕ್ರ್ಯಾಪ್ ರವಿ ಎಂಬುವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ರವಿ ಆನೇಕಲ್ ಪುರಸಭೆಯ 22ನೇ ವಾರ್ಡ್ ಸದಸ್ಯರಾಗಿದ್ದರು.
ಹಳೆಯ ವೈಷಮ್ಯದಿಂದಾಗಿ ಈ ಹತ್ಯೆ ನಡೆದಿದೆ ಎಂದು ವರದಿಯಾಗಿದೆ. ದಾಳಿ ಮಾಡಿದವರ ಬಗ್ಗೆ ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಆನೇಕಲ್ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ