ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಬೇಡಿಕೆಯನ್ನು ಈಡೇರಿಸಿ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸರ್ಕಾರದ ವಿರುದ್ಧ ಇಂದಿನಿಂದ ಪ್ರತಿಭಟನೆ ಕೈಗೊಳ್ಳಲಿದ್ದಾರೆ.
ಎಐಟಿಯುಸಿ (AITUC) ಜಯಮ್ಮ ನೇತೃತ್ವದಲ್ಲಿ ಫ್ರೀಡಂಪಾರ್ಕ್ನಲ್ಲಿ ಇಂದಿನಿಂದ ಅನಿರ್ಧಷ್ಟಾವಧಿವರೆಗೆ ಪ್ರತಿಭಟನೆ ನಡೆಸಲು ಸಜ್ಜಾಗಿದ್ದು, ಶೀಘ್ರವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಿದ್ದಾರೆ.
ಬೆಂಗಳೂರು ನಗರದಲ್ಲಿ ಒಟ್ಟು 2877 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಈ ಪೈಕಿ 430 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು 1198 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಕಳೆದ 3-4 ವರ್ಷದಿಂದ ನೌಕರರ ನೇಮಕವಾಗಿಲ್ಲ. ಮಾರ್ಚ್ 5 ರಂದು ಭೌತಿಕವಾಗಿ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದ್ದು, ಸಾಕಷ್ಟು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹುದ್ದೆಗೆ ಅರ್ಜಿ ಹಾಕಿದ್ದಾರೆ.
ಅರ್ಜಿ ಹಾಕಿ 8 ತಿಂಗಳು ಕಳೆದರೂ ಇಲಾಖೆಯ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅಂಗನವಾಡಿಗಳಲ್ಲಿ ಪ್ರತಿನಿತ್ಯ ಸಾಕಷ್ಟು ಕೆಲಸ ಇರುವುದರಿಂದ ಒಬ್ಬರ ಕೈಯಲ್ಲಿ ನಿಭಾಯಿಸಲು ಸಾಧ್ಯವಿಲ್ಲ. ಆದ್ದರಿಂದ ಕೂಡಲೇ ನೇಮಕಾತಿ ಮಾಡಿಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಲಿದ್ದಾರೆ.