ಹೊಸದಿಗಂತ ವರದಿ, ಮಂಡ್ಯ :
ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ತಾಲೂಕುಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆ ನೀಡಿರುವ ಮುನ್ನೆಚ್ಚರಿಕಾ ಕ್ರಮದಿಂದ ಡಿ. 3ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ರಜೆಯು ಜಿಲ್ಲೆಯ ಸರ್ಕಾರಿ, ಖಾಸಗೀ, ಅನುದಾನಿತ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ (ಎರಡನೇ ಪಿಯುಸಿ) ವರೆಗೆ ಅನ್ವಯವಾಗುವಂತೆ ಘೋಷಿಸಲಾಗಿದ್ದು, ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಆದೇಶಿಸಿದ್ದಾರೆ.