ನಗರ್ತ ಪೇಟೆಯಲ್ಲಿ ಭುಗಿಲೆದ್ದ ಆಕ್ರೋಶ: ಸಂಸದೆ ಶೋಭಾ ಸಹಿತ ಪ್ರತಿಭಟನಾ ನಿರತರು ಪೊಲೀಸ್ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹನುಮಾನ್ ಚಾಲೀಸ ಹಾಕಿದ ಕಾರಣಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಆಕ್ರೋಶ ಭುಗಿಲೆದಿದ್ದು, ಕೃತ್ಯವನ್ನು ಖಂಡಿಸಿ ಪ್ರತಿಭಟನೆಗೆ ಮುಂದಾಗಿದ್ದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಸಹಿತ ಹಿಂದು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸದ್ಯ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಘಟನಾ ಸ್ಥಳದಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದೆ. ಸುಮಾರು ಸಾವಿರಕ್ಕೂ ಅಧಿಕ ಪ್ರತಿಭಟನಾಕಾರರು ಪ್ರತಿಭಟನೆ ಮುಂದುವರಿಸಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಭಾರೀ ಸಾಹಸ ಪಡುತ್ತಿದ್ದಾರೆ. ಇಲ್ಲಿ ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಮುಚ್ಚಲಾಗಿದೆ.

ಹನುಮಾನ್ ಚಾಲೀಸಾ ಹಾಕಿದರು ಎಂಬ ಕಾರಣಕ್ಕೆ ಅಂಗಡಿ ಮಾಲೀಕ ಮುಕೇಶ್ ಎಂಬವರ ಮೇಲೆ ಹಲ್ಲೆ ನಡೆಸಲಾದ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ ಬಂಧನಕ್ಕೆ ಒಳಗಾದವರು ಹಲ್ಲೆ ಮಾಡಿದ ವ್ಯಕ್ತಿಗಳಲ್ಲ. ಹಲ್ಲೆ ಮಾಡಿದ ಯುವಕರನ್ನು ರಕ್ಷಿಸಲು ಬೇರೆ ಯುವಕರನ್ನು ಬಂಧಿಸಲಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕ ಮುಕೇಶ್ ಅವರ ಪ್ರತಿಭಟನೆಗೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!