ಅಂಕೋಲ: ಸಂಭ್ರಮದಿಂದ ಜರುಗಿದ ʼಅಮೃತ ಭಾರತಿಗೆ ಕನ್ನಡದಾರತಿʼ ಕಾರ್ಯಕ್ರಮ

ಹೊಸದಿಗಂತ ವರದಿ, ಅಂಕೋಲಾ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತರ ಕನ್ನಡ, ತಾಲೂಕು ಆಡಳಿತ ಅಂಕೋಲಾ, ಪುರಸಭೆ ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಹಲವಾರು ವಿಶೇಷತೆಗಳೊಂದಿಗೆ ಸಂಭ್ರಮದಿಂದ ಜರುಗಿತು.
ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಪುರಸಭೆ ಅಧ್ಯಕ್ಷೆ ಶಾಂತಲಾ ನಾಡಕರ್ಣಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಉಪ ವಿಭಾಗಾಧಿಕಾರಿ ರಾಹುಲ್ ರತ್ನಮ್ ಪಾಂಡೆ, ಪುರಸಭೆ ಉಪಾಧ್ಯಕ್ಷೆ ರೇಖಾ ಗಾಂವಕರ್, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಾ ನಾಯ್ಕ, ಸಾಹಿತಿ ಶಾಂತಾರಾಮ ನಾಯಕ, ತಹಶೀಲ್ಧಾರ ಉದಯ ಕುಂಬಾರ, ತಾ.ಪಂ ಕಾರ್ಯನಿರ್ವಹಣ ಅಧಿಕಾರಿ ಪಿ ವೈ ಸಾವಂತ್,
ಕ.ಸ.ಪಾ ಅಧ್ಯಕ್ಷ ಗೋಪಾಲಪಕೃಷ್ಣ ನಾಯಕ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಚಂದ್ರ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ್, ಪುರಸಭೆ ಮುಖ್ಯಾಧಿಕಾರಿ ಎನ್.ಎಂ.ಮೇಸ್ತ, ಪೊಲೀಸ್ ನಿರೀಕ್ಷಕ ಸಂತೋಷ ಶೆಟ್ಟಿ ಉಪಸ್ಥಿತರಿದ್ದರು.
ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಜಿ.ಎಲ್. ಹೆಗಡೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಪಟ್ಟಣದಲ್ಲಿ ನಡೆದ ಆಕರ್ಷಕ ಮೆರವಣಿಗೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಚಂಡೆ ವಾದನ, ಹಾಲಕ್ಕಿ ಗುಮಟೆ ವಾದನ, ಆಗೇರ ಪಂಚವಾದ್ಯ,ಮರಕಾಲು ಕುಣಿತದೊಂದಿಗೆ ಪಾಲ್ಗೊಂಡು ವಿಶೇಷ ಮೆರಗನ್ನು ನೀಡಿದರು.
ಸಂಗಾತಿ ರಂಗಭೂಮಿ ತಂಡದಿಂದ ಪ್ರದರ್ಶಿಸಲ್ಪಟ್ಟ ವಿಶೇಷ ನೃತ್ಯ ಗಮನ ಸೆಳೆಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!