ದರ್ಶನ್‌ ಮೇಲೆ ಸಿಟ್ಟು, ಇನ್ಸ್ಟಾ ಅಕೌಂಟ್‌ ಡೀಆಕ್ಟಿವೇಟ್‌ ಮಾಡಿದ ವಿಜಯಲಕ್ಷ್ಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿ ತುಂಬಾ ಬೇಸರವಾಗಿದ್ದರು. ಇದರ ಬೆನ್ನಲ್ಲೇ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಇನ್​ಸ್ಟಾ ಖಾತೆಯನ್ನು ಡಿ-ಆಕ್ಟಿವೇಟ್‌ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರರಕಣದಲ್ಲಿ ಪವಿತ್ರಾ ಗೌಡ, ದರ್ಶನ್ ಹೆಸರು ಕೇಳಿ ಬರುತ್ತಿದ್ದಂತೆ ನಿನ್ನೆ ಇನ್​​ಸ್ಟಾದಲ್ಲಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಅನ್​ಫಾಲೋ ಮಾಡಿದ್ದರು. ಅಲ್ಲದೇ ದರ್ಶನ್ ಫ್ಯಾನ್​ ಪೇಜ್​ ಅನ್ನು ಅನ್​​ಫಾಲೋ ಮಾಡಿ ಇನ್​​ಸ್ಟಾಗೆ ಇದ್ದ ಡಿಪಿ ಫೋಟೋವನ್ನು ತೆಗೆದು ಹಾಕಿದ್ದರು. ಇದರಿಂದ ಇನ್​​ಸ್ಟಾ ಖಾತೆಯ ಡಿಪಿ ಬ್ಲಾಂಕ್​ನಲ್ಲಿತ್ತು. ಸದ್ಯ ಈ ಎಲ್ಲದರ ಬೆನ್ನಲ್ಲೇ ಇದೀಗ ತಮ್ಮ ಇನ್​ಸ್ಟಾ ಖಾತೆಯನ್ನು ವಿಜಯಲಕ್ಷ್ಮಿ ಅವರು ಡಿ-ಆ್ಯಕ್ಟಿವೇಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!