ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ: ತಂದೆ, ಕಾಂಗ್ರೆಸ್ ನಾಯಕ ಎಕೆ ಆಂಟನಿ ಬೇಸರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾಂಗ್ರೆಸ್ ಮುಖಂಡನ ಪುತ್ರ ಅನಿಲ್ ಕೆ.ಆಂಟನಿ (Anil Antony) ಬಿಜೆಪಿಗೆ (BJP) ಸೇರ್ಪಡೆಗೊಂಡಿದ್ದು, ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ (AK Antony) ಬೇಸರ ವ್ಯಕ್ತಪಡಿಸಿದ್ದಾರೆ.
ಅನಿಲ್ ಆಂಟನಿಯ ನಿರ್ಧಾರ ತಪ್ಪು ಇದರಿಂದ ನನಗೆ ತುಂಬಾ ನೋವಾಗಿದೆ ಎಂದು ಎಕೆ ತಿಳಿಸಿದ್ದಾರೆ.

ಭಾರತದ ಆಧಾರವೆಂದರೆ ಏಕತೆ ಮತ್ತು ಧಾರ್ಮಿಕ ಸಾಮರಸ್ಯ. 2014 ರ ನಂತರ,ಮೋದಿ ಸರ್ಕಾರ ಅಧಿಕಾರಕ್ಕೆ ಬಂತು ಅವರು ವ್ಯವಸ್ಥಿತವಾಗಿ ವೈವಿಧ್ಯತೆ ಮತ್ತು ಜಾತ್ಯತೀತತೆಯನ್ನು ದುರ್ಬಲಗೊಳಿಸುತ್ತಿದ್ದಾರೆ. ನನ್ನ ಕೊನೆಯ ಉಸಿರು ಇರುವವರೆಗೂ ಬಿಜೆಪಿಯ ತಪ್ಪು ಮತ್ತು ವಿಧ್ವಂಸಕ ನಿಲುವಿನ ವಿರುದ್ಧ ಧ್ವನಿ ಎತ್ತುತ್ತೇನೆ. ಜೀವನದ ಕೊನೆಯ ದಿನಗಳಿಗೆ ಹೋಗುತ್ತಿದ್ದೇನೆ. ಇನ್ನೆಷ್ಟು ದಿನ ಬದುಕಿದರೂ ಸಾಯುವವರೆಗೂ ನಾನು ಕಾಂಗ್ರೆಸ್ ಕಾರ್ಯಕರ್ತ. ಇನ್ನು ಮುಂದೆ ಅನಿಲ್‌ಗೆ ಸಂಬಂಧಿಸಿದ ಯಾವುದೇ ಚರ್ಚೆ ಅಥವಾ ಪ್ರಶ್ನೆಗಳಿಗೆ ಉತ್ತರಿಸಲು ನಾನು ಸಿದ್ಧನಿಲ್ಲ. ಇದು ಮೊದಲ ಮತ್ತು ಕೊನೆಯ ಪ್ರತಿಕ್ರಿಯೆ ಎಂದು ಎ.ಕೆ.ಆಂಟನಿ ಹೇಳಿದ್ದಾರೆ.

ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಅನಿಲ್ ಆಂಟನಿ ಅವರಿಗೆ ಬಿಜೆಪಿ ಸದಸ್ಯತ್ವ ನೀಡಿದರು.

ಬಿಜೆಪಿ ಸೇರಿದ ಅನಿಲ್ ಆಂಟನಿ ಇಂದು ಕಾಂಗ್ರೆಸ್ ಪಕ್ಷದವರ ಧರ್ಮ ಕೇವಲ ಒಂದು ಕುಟುಂಬಕ್ಕಾಗಿ ಕೆಲಸ ಮಾಡಬೇಕು ಎನ್ನುವುದು. ಆದರೆ ನನ್ನ ಧರ್ಮ ಏನೆಂದರೆ ದೇಶಕ್ಕಾಗಿ ಕೆಲಸ ಮಾಡಬೇಕು ಎನ್ನುವುದು.ನಮ್ಮ ಪ್ರಧಾನಿ ದೇಶವನ್ನು ಮುಂದಿನ 25 ವರ್ಷಗಳಲ್ಲಿ ಯಾವ ರೀತಿ ಕೊಂಡೊಯ್ಯಬೇಕು ಎನ್ನುವುದರ ಬಗ್ಗೆ ಸ್ಪಷ್ಟವಾದ ದೃಷ್ಟಿಕೋನವನ್ನು ಹೊಂದಿದ್ದಾರೆ. ಅವರಲ್ಲಿ ದೇಶದ ಜನರ ಅಭಿವೃದ್ಧಿಗಾಗಿ ಇರುವ ಸ್ಪಷ್ಟವಾದ ಗುರಿ ಇದೆ. ಬಿಜೆಪಿ ದೇಶಕ್ಕಾಗಿ ಕೆಲಸ ಮಾಡುತ್ತಿದೆ. ಅದರ ಸಮರ್ಪಕ ಅನುಷ್ಠಾನಕ್ಕೆ ಪ್ರಧಾನಿ ಮತ್ತು ಪಕ್ಷ ಬದ್ಧವಾಗಿದೆ. ಯುವಕರ ಪ್ರತಿನಿಧಿಯಾಗಿ ಪ್ರಧಾನಿಯವರ ಅಭಿಪ್ರಾಯದಂತೆ ಕೆಲಸ ಮಾಡುವುದು ಅಗತ್ಯ ಎಂದು ಹೇಳಿದ್ದಾರೆ. ಬಿಜೆಪಿಯ 44 ನೇ ಸಂಸ್ಥಾಪನಾ ದಿನದಂದು, ದೇಶಕ್ಕಾಗಿ ಕೆಲಸ ಮಾಡುವ ಅವಕಾಶವನ್ನು ನೀಡಿದ ನಾಯಕತ್ವಕ್ಕೆ ಧನ್ಯವಾದಗಳು. ನರೇಂದ್ರ ಮೋದಿಯವರ ಕನಸುಗಳಿಗೆ ಹೆಗಲಾಗಿ ನಿಲ್ಲುವುದಕ್ಕೆ ಒಂದು ಅವಕಾಶ ಸಿಕ್ಕಿದೆ ಎಂದು ಅನಿಲ್ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!