ಬಂದ್‌ ಬಿಸಿ: ಬಿಎಂಟಿಸಿ ಬಸ್​​ನಲ್ಲೇ ಪ್ರಯಾಣಿಸಿದ ಅನಿಲ್‌ ಕುಂಬ್ಳೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು ಬಂದ್‌ ಬಿಸಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಗೂ ತಟ್ಟಿದ್ದು, ಇಂದು ಬೆಂಗಳೂರು ವಿಮಾನ ನಿಲ್ದಾಣದಿಂದ ತಮ್ಮ ಮನೆಗೆ ಬಿಎಂಟಿಸಿ ಬಸ್ ನಲ್ಲೇ ಪ್ರಯಾಣ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾ‍ಧ್ಯಮ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡಿರುವ ಅವರು, ಇಂದು ವಿಮಾನ ನಿಲ್ದಾಣದಿಂದ ಬಿಎಂಟಿಸಿ ಬಸ್​​ ನಲ್ಲಿ ಮನೆಗೆ ಪ್ರಯಾಣಿಸಿದೆ ಎಂದು ಬರೆದುಕೊಂಡು ಬಸ್​ನಲ್ಲಿ ಕ್ಲಿಕ್ಕಿಸಿದ ಸೆಲ್ಫಿಯನ್ನು ಕೂಡ ಹಂಚಿಕೊಂಡಿದ್ದಾರೆ.

ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಬಂದ್ ಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!