ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣ ಸಿಎಂ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದು, ಈ ಬೆಳವಣಿಗೆಯ ನಂತರ ಹರಿಯಾಣದ ಹೊಸ ಮುಖ್ಯಮಂತ್ರಿ ಹಾಗೂ ಇಬ್ಬರು ಉಪಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ.
ಆರ್‌ಎಸ್‌ಎಸ್ ಸದಸ್ಯ ಮತ್ತು ಬಿಜೆಪಿ ನಿಷ್ಠಾವಂತ ನಯಾಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಹರಿಯಾಣದ ಮಾಜಿ ಗೃಹ ಸಚಿವ ಅನಿಲ್ ವಿಜ್ ಮತ್ತು ಭವ್ಯಾ ಬಿಷ್ಣೋಯ್ ಉಪಮುಖ್ಯಮಂತ್ರಿಗಳಾಗಿ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.