ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಗೆದ್ದರೆ ಹರಿಯಾಣದ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಮಾಜಿ ಕ್ಯಾಬಿನೆಟ್ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಶಾಸಕ ಅನಿಲ್ ವಿಜ್ ಒತ್ತಾಯಿಸಿದ್ದಾರೆ.
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಯಾಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಪಕ್ಷವು ಈಗಾಗಲೇ ಸ್ಪಷ್ಟಪಡಿಸಿರುವ ಸಮಯದಲ್ಲಿ ಶಾಸಕರ ಈ ಮಾತು ಗಮನಾರ್ಹವಾಗಿವೆ.
ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ವಿಜ್, ತಾನು ಹರಿಯಾಣದಲ್ಲಿ ಬಿಜೆಪಿಯ ಅತ್ಯಂತ ಹಿರಿಯ ಶಾಸಕನಾಗಿದ್ದು, ಪಕ್ಷದಿಂದ ಎಂದಿಗೂ ಏನನ್ನೂ ಕೇಳಿಲ್ಲ. ನಾನು 6 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಜನರ ಬೇಡಿಕೆಯ ಮೇರೆಗೆ ಈ ಬಾರಿ ನನ್ನ ಹಿರಿತನದ ಆಧಾರದ ಮೇಲೆ ಸಿಎಂ ಹುದ್ದೆಗೆ ಬೇಡಿಕೆ ಇಡುತ್ತೇನೆ ಎಂದು ಅನಿಲ್ ವಿಜ್ ಹೇಳಿದ್ದಾರೆ.