ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಿದ್ಧ ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ವರದಿ ಕೇಳಿದ್ದಾರೆ.
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ವರದಿಯನ್ನು ಪರಿಶೀಲಿಸಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಖಚಿತಪಡಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರು ಇಂದು ಈ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರೊಂದಿಗೆ ಮಾತನಾಡಿದ್ದಾರೆ. ಪ್ರಸಿದ್ಧ ತಿರುಪತಿ ಲಡ್ಡೂಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಇತರ ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಕೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಜೆ.ಪಿ. ನಡ್ಡಾ, ಆಂಧ್ರ ಸರ್ಕಾರ ಸಲ್ಲಿಸುವ ವರದಿಯನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಪರಿಶೀಲಿಸಲಿದ್ದು, ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
Breaking: Test report confirms beef fat, fish oil used in making laddus at Tirupati Temple.
Massive betrayal of Hindu Aastha! pic.twitter.com/J1hdV2J9MW
— Rahul Shivshankar (@RShivshankar) September 19, 2024