ಪ್ರಾಣಿ ಪ್ರಿಯರೇ ಭಯ ಇರಲಿ! ಬೆಕ್ಕುಗಳಿಗೆ ವಕ್ಕರಿಸಿದೆ ಮಾರಣಾಂತಿಕ ಎಫ್​ಪಿವಿ ವೈರಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದೆಲ್ಲೆಡೆ ಇದೀಗ ಬೆಕ್ಕುಗಳಿಗೆ ಮಾರಣಾಂತಿಕ ಎಫ್​ಪಿವಿ ವೈರಸ್ ವಕ್ಕರಿಸಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸಬೇಕಿದೆ.

ವೈರಸ್ ಸೋಂಕಿನಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಬೆಕ್ಕುಗಳು ಸಾವನ್ನಪ್ಪುತ್ತಿವೆ ಬೆಕ್ಕುಗಳು. ಜಿಲ್ಲೆಯಲ್ಲಷ್ಟೇ ಅಲ್ಲದೆ, ರಾಜ್ಯದ ವಿವಿದೆಡೆ ವೈರಸ್ ಸೋಂಕು ಹರಡುತ್ತಿದೆ. ರಾಯಚೂರಿನಲ್ಲಿ ಕಳೆದ ಒಂದು ತಿಂಗಳಲ್ಲಿ ನೂರಕ್ಕೂ ಹೆಚ್ಚು ಬೆಕ್ಕುಗಳಲ್ಲಿ ವೈರಾಣು ಪತ್ತೆಯಾಗಿದೆ.

ಒಂದು ಕಡೆ 10 ಬೆಕ್ಕುಗಳಿದ್ದರೆ, ಆ ಪೈಕಿ ಒಂದು ಬೆಕ್ಕಿಗೆ ವೈರಸ್ ಸೋಂಕು ತಗಲಿದರೆ ಕೆಲವೇ ಸೆಕೆಂಡುಗಳಲ್ಲಿ ಸಮೀಪದ ಎಲ್ಲಾ ಬೆಕ್ಕುಗಳಿಗೂ ವೈರಸ್ ಹರಡುತ್ತದೆ. ಇದರಿಂದಾಗಿ ಬೆಕ್ಕು ಸಾಕಾಣಿಕೆ ಮಾಡುವವರಿಗೆಬೆ, ಕ್ಕುಗಳನ್ನು ಹೊಂದಿರುವವರಿಗೆ ಆತಂಕ ಉಂಟಾಗಿದೆ.

ಕೊರೊನಾ ವೈರಸ್ ರೀತಿ ಎಫ್​ಪಿವಿ ವೈರಾಣು ಸೋಂಕಿಗೂ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಲಕ್ಷಣ ಆಧರಿಸಿ ಚಿಕಿತ್ಸೆ ನೀಡಲಾಗುತ್ತದೆ. ರಾಯಚೂರಿನಲ್ಲಿ ಸದ್ಯ 150 ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 100 ಕ್ಕೂ ಹೆಚ್ಚು ಬೆಕ್ಕುಗಳು ಚಿಕಿತ್ಸೆ ಫಲಕಾರಿಯಾಗದೇ ಈಗಾಗಲೇ ಮೃತಪಟ್ಟಿವೆ. ಬೀದಿ ಬೆಕ್ಕುಗಳು, ಸಾಕು ಬೆಕ್ಕುಗಳಲ್ಲಿ ವೈರಸ್ ಪತ್ತೆಯಾಗಿದೆ.

ಎಫ್​ಪಿವಿ ವೈರಸ್​ ತಗುಲಿದರೆ ಮೂರು ಹಂತದಲ್ಲಿ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಮೊದಲ ಹಂತದಲ್ಲಿ ವಾಂತಿ, ಬೇಧಿ, ನಿರ್ಜಲೀಕರಣ ಉಂಟಾಗುತ್ತದೆ. ಎರಡನೆ ಹಂತದಲ್ಲಿ ಹೆಚ್ಚಿನ ತಾಪದೊಂದಿಗೆ ಜ್ವರ ಕಾಣಿಸಿಕೊಳ್ಳುತ್ತದೆ. ಮೂರನೇ ಹಂತದಲ್ಲಿ ನಿಶ್ಯಕ್ತಿ, ಖಿನ್ನತೆ ಉಂಟಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!