ರಾಜಧಾನಿಯಲ್ಲಿ ಪ್ರಾಣಿ ವಧೆ ನಿಷೇಧ, ಮಟನ್, ಚಿಕನ್ ಅಂಗಡಿ ಬಂದ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶಾದ್ಯಂತ ಇಂದು ರಾಮನಾಮಸ್ಮರಣೆ ಭಕ್ತಿಯಲ್ಲಿ ಜನ ಮಿಂದೇಳುತ್ತಿದ್ದು, ರಾಮನವಮಿ ಹಿನ್ನೆಲೆ ರಾಜಧಾನಿಯಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ.

ಯಾವುದೇ ರೀತಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಬಿಬಿಎಂಪಿ ಮಹತ್ವದ ಆದೇಶ ನೀಡಿದೆ. ಬಿಬಿಎಂಪಿ ಆಯುಕ್ತರು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಏರಿಯಾಗಳಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!