ಅಂಜನಾದ್ರಿ ಬೆಟ್ಟದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ: ಮೂವರು ಯುವಕರಿಗೆ ಗಂಭೀರ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ಅಂಗಡಿ ಇಡುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ.
ಅಂಗಡಿ ಇಡುವ ವಿಚಾರ ಸಂಬಂಧ ಅಂಜನಾದ್ರಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಹನುಮನಹಳ್ಳಿಯ ಮುತ್ತಪ್ಪ (23), ಸುರೇಶ್ (21) ಹಾಗೂ ಲಿಂಗರಾಜ್ (26) ಎಂಬುವರು ಗಾಯಗೊಂಡಿದ್ದಾರೆ.
ಅಂಗಡಿ ಇಡುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು, ಈ ವೇಳೆ ಮೂವರ ಮೇಲೆ ಅನ್ಯಕೋಮಿನ ಯುವಕರ ಗುಂಪು ಮೂವರು ಯುವಕರ ಮೇಲೆ ಕಟ್ಟಿಗೆ, ಮಚ್ಚುಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಯುವಕರನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!