ಕಾಂಗ್ರೆಸ್ ನಿಂದ ಆಂಜನೇಯನಿಗೆ ಅಪಮಾನ: ಅಮಿತ್ ಶಾ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್ ಈ ಹಿಂದೆ ಸಾವರ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ. ಇದೀಗ ಆಂಜನೇಯನಿಗೂ ಅಪಮಾನ ಮಾಡುತ್ತಿದ್ದಾರೆ. ಬಜರಂಗದಳ ನಿಷೇಧ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸುವ ಮೂಲಕ ಹನುಮ ಭಕ್ತರನ್ನು ಅವಮಾನಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಸ್ವಾತಂತ್ರ್ಯ ಸೇನಾನಿ ವೀರಸಾವರ್ಕರ್ ಅವರನ್ನು ಕಾಂಗ್ರೆಸ್ ಪಕ್ಷದವರು ಬೆಳಗಾವಿ ಹಿಂಡಲಗಾ ಜೈಲಿಗೆ ಹಾಕಿದ್ದರು. ಎರಡು ಬಾರಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ವೀರ ಸಾವರ್ಕರ್ ಅವರನ್ನು ಕಾಂಗ್ರೆಸ್ ನಾಯಕರು ಪದೇ ಪದೇ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿಯವರು ಸಾವರ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ. ನೀವು 10 ಜನ್ಮ ಹುಟ್ಟಿ ಬಂದರೂ ಸಾವರ್ಕರ್ ರಂತಹ ಬಲಿದಾನ ನೋಡಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.

ಭಾರತದ ಜನರು ನರೇಂದ್ರ ಮೋದಿ ನಂಬುತ್ತಾರೆ. ಮೋದಿಯನ್ನು ಮಲ್ಲಿಕಾರ್ಜುನ ಖರ್ಗೆ ವಿಷದ ಸರ್ಪ ಎನ್ನುತ್ತಾರೆ. ಖರ್ಗೆಯವರೇ ಮೋದಿಯನ್ನು ಎಷ್ಟು ಟೀಕಿಸುತ್ತೀರೋ ಟೀಕಿಸಿ. ನೀವು ಎಷ್ಟು ಬೈಯ್ಯುತ್ತೀರೋ ಕಮಲ ಅಷ್ಟು ಅರಳುತ್ತದೆ. ನರೇಂದ್ರ ಮೋದಿಯನ್ನು ಎಷ್ಟು ಬೈದರೂ ನಿಮಗೆ ಹೊಟ್ಟೆ ತುಂಬಿಲ್ಲ. ಅದಕ್ಕೆ ಬಜರಂಗಬಲಿ ವಿರುದ್ಧ ಕಾಂಗ್ರೆಸ್​ನವರು ನಿಂತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್​​ನವರು ಮುಸ್ಲಿಂರಿಗೆ ಮೀಸಲಾತಿ ಕೊಡುತ್ತೇವೆ ಅಂತಿದ್ದಾರೆ. ಲಿಂಗಾಯತರ ಮೀಸಲಾತಿ ಕಿತ್ತುಕೊಂಡು ಮುಸ್ಲಿಂ ಸಮುದಾಯಕ್ಕೆ ಕೊಡುತ್ತಾರೆ. ಲಕ್ಷ್ಮಣ ಪದೇ ಪದೇ ನನ್ನ ಬಳಿ ಮಹದಾಯಿ ಯೋಜನೆಗಾಗಿ ಬರುತ್ತಿದ್ದರು. ನೀರಾವರಿ ಯೋಜನೆ ಸಲುವಾಗಿ ನನ್ನ ಬಳಿ ಬಂದಾಗ ಕಾಂಗ್ರೆಸ್‌ಗೆ ಬೈಯ್ಯುತ್ತಿದ್ರಿ ಇವತ್ತೇನಾಗಿದೆ ಎಂದರು.
ಸೋನಿಯಾ ಗಾಂಧಿ ಗೋವಾ ಚುನಾವಣೆ ವೇಳೆ ಕರ್ನಾಟಕಕ್ಕೆ ಮಹದಾಯಿ ನೀರು ಕೊಡಲ್ಲ ಅಂದಿದ್ದರು. ಆದರೆ ಸೋನಿಯಾ ಗಾಂಧಿನೂ ಹೋದ್ರೂ ಅವರ ಪಕ್ಷವೂ ಗೋವಾದಿಂದ ಹೋಯಿತು. ಮೋದಿ ಬಂದ ಮೇಲೆ ಉತ್ತರ ಕರ್ನಾಟಕಕ್ಕೆ ಮಹದಾಯಿ ನೀರು ಕೊಡುವ ಕೆಲಸ ಆಗಿದೆ. ಜಾರಕಿಹೊಳಿ ಮತ್ತು ಮಹೇಶ್ ಬಂದ ಮೇಲೆ ಯಡಿಯೂರಪ್ಪ ಸರ್ಕಾರ ಬಂದಿದೆ ಎಂದು ಹೇಳಿದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಅಟಲ್ ಕ್ಯಾಂಟೀನ್ ಆರಂಭವಾಗುತ್ತದೆ. ಕಿತ್ತೂರು ಕರ್ನಾಟಕದಲ್ಲಿ ಅನೇಕ ಯೋಜನೆ ಜಾರಿ ಮಾಡಿದ್ದೇವೆ. ಬೆಳಗಾವಿಗೆ 25 ಕೋಟಿ ಅನುದಾನ ನೀಡಲಾಗಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!