SSLC RESULT | ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಟಾಪರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

2023-24ನೇ ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಬಾಗಲಕೋಟೆ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಶ್ರದ್ಧೆಯಿಂದ ಪ್ರಯತ್ನ ಮಾಡಿದರೆ ಗೆಲುವು ನಿಶ್ಚಿತ ಎನ್ನುವುದಕ್ಕೆ ಅಂಕಿತಾ ಸಾಕ್ಷಿಯಾಗಿದ್ದು, ಕುಟುಂಬದವರು ಹಾಗೂ ಶಾಲೆಯಿಂದ ಅಭಿನಂದನೆಯ ಮಹಾಪೂರ ಹರಿದುಬಂದಿದೆ.

ಬೆಂಗಳೂರಿನ ಮೇಧಾ ಪಿ ಶೆಟ್ಟಿ  ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಾರ್ಕಳ ತಾಲೂಕಿನ ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದು ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!