ಅಂಕೋಲಾ ಕ್ಷೇತ್ರದ ಅಭ್ಯರ್ಥಿ ರೂಪಾಲಿ ನಾಯ್ಕ ನಾಮಪತ್ರ ಸಲ್ಲಿಕೆ

ಹೊಸದಿಗಂತ ವರದಿ ಕಾರವಾರ:

ಭಾರತೀಯ ಜನತಾ ಪಕ್ಷದಿಂದ ಕಾರವಾರ ಅಂಕೋಲಾ ಕ್ಷೇತ್ರದ ಅಭ್ಯರ್ಥಿಯಾಗಿ ಹಾಲಿ ಶಾಸಕಿ ರೂಪಾಲಿ ನಾಯ್ಕ ಅವರು ತಮ್ಮ ನಾಮಪತ್ರ ಸಲ್ಲಿಸಿದರು.

ನಗರದ ಮಾಲಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರ ಹರ್ಷೋದ್ಗಾರಗಳ ನಡುವೆ ಮೆರವಣಿಗೆಯಲ್ಲಿ ನಗರಸಭೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿದ ಅವರು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಗೋವಾ ಮುಖ್ಯ ಮಂತ್ರಿ ಪ್ರಮೋದ ಸಾವಂತ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿ ರೂಪಾಲಿ ನಾಯ್ಕ ಅವರ ಜೊತೆಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!