ಅಂಕೋಲಾ: ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಮೂಲಕ ಚಾಲನೆ ನೀಡಿದ ಶಾಸಕಿ ರೂಪಾಲಿ ನಾಯ್ಕ

ಹೊಸದಿಗಂತ ವರದಿ, ಅಂಕೋಲಾ:

ತಾಲೂಕಿನ ಸಗಡಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಕರ್ಣ ವಡ್ಡಿ ರಸ್ತೆ ಮತ್ತು ವಾಸರಕುದ್ರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಗಸೂರು ಶಿರಗುಂಜಿ ರಸ್ತೆ ಕಾಮಗಾರಿಗಳಿಗೆ ಮಾದನಗೇರಿ ಬಳಲೆಯಲ್ಲಿ ಶಾಸಕಿ ರೂಪಾಲಿ ನಾಯ್ಕ ಅವರು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರಿಗೆ ಅತ್ಯಂತ ಅವಶ್ಯಕ ಮೂಲಭೂತ ಸೌಕರ್ಯಗಳಲ್ಲಿ ಒಂದಾಗಿರುವ ರಸ್ತೆಗಳ ಅಭಿವೃದ್ಧಿಗೆ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದರು.
ಸುಗಮ ಸಂಚಾರಕ್ಕೆ ತೊಂದರೆ ನೀಡುವ ರಸ್ತೆಗಳ ಅಭಿವೃದ್ಧಿ ಅತ್ಯಗತ್ಯ ಎಂದ ಅವರು ಯಾವುದೇ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಇದ್ದರೆ ಅದನ್ನು ಪರಿಹರಿಸಲು ಸದಾ ಸಿದ್ಧರಾಗಿರುವುದಾಗಿ ತಿಳಿಸಿದರು.
ಯಾವುದೇ ರೀತಿಯ ಕಳಪೆತನ ಇಲ್ಲದೇ ಸುಂದರ ಸುಸಜ್ಜಿತ ರಸ್ತೆ ಗಳನ್ನು ನಿರ್ಮಾಣ ಆಗುವಂತೆ ಗಮನ ಹರಿಸಬೇಕು ಎಂದು ಶಾಸಕಿ ರೂಪಾಲಿ ನಾಯ್ಕ ಅವರು ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಸಂಜಯ ನಾಯ್ಕ, ಸಗಡಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೀತಾ ಗೌಡ, ಉಪಾಧ್ಯಕ್ಷ ಶ್ರವಣಕುಮಾರ್,ವಾಸರಕುದ್ರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರದೀಪ ನಾಯಕ ಮೊದಲಾದವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!