ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆಯ ಚುನಾವಣಾ ಕಾವು ಹೆಚ್ಚಾಗುತ್ತಿದ್ದು, ತಮ್ಮ ತಮ್ಮ ಪಕ್ಷಗಳ ಪರ ಪ್ರಚಾರಕ್ಕಾಗಿ ಕೇಂದ್ರ, ರಾಜ್ಯ ನಾಯಕರು ಪಣ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕರ್ನಾಟಕ ಬಿಜೆಪಿ ಚುನಾವಣಾ ಸಹ ಪ್ರಭಾರಿ ಅಣ್ಣಾಮಲೈ ಇಲ್ಲಿನ ಕಾರ್ಯಕರ್ತರ ಪ್ರಾಣ ತ್ಯಾಗವನ್ನು ಸ್ಮರಿಸಿದರು.
ಬಹಳ ಧೈರ್ಯಶಾಲಿ ಕ್ರಮವನ್ನು ಮೋದಿ ತೆಗೆದುಕೊಂಡಿದ್ದಾರೆ ಎಂದರೆ ಅದಕ್ಕೆ ಮತದಾರರು ಕಾರಣ. ಮುಂದೆಯೂ ಇಂತಹ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ. ಅದಕ್ಕಾಗಿ ರಾಜ್ಯದಲ್ಲಿ ಬಿಜೆಪಿ 130ಕ್ಕೂ ಅಧಿಕ ಸೀಟ್ ಪಡೆದುಕೊಳ್ಳಬೇಕು. ಇದಕ್ಕೆ ಪೂರಕವಾಗಿ ಬಿಜೆಪಿಯ ಭದ್ರ ಬುನಾದಿ ಇರುವ ಪುತ್ತೂರಿನಲ್ಲೂ ಬಿಜೆಪಿ ಗೆಲ್ಲಲಿದೆ ಎಂದರು.
ಬಂಡಾಯ, ಪಕ್ಷೇತರ ಅಭ್ಯರ್ಥಿಗಳ ಬಗ್ಗೆ ಮಾತನಾಡಲ್ಲ. ಕರಾವಳಿಯಲ್ಲಿ ಬಿಜೆಪಿ ಭದ್ರಬುನಾದಿ ಇರುವ ಕಾರಣ, ಪಕ್ಷೇತರರು ಬಿಜೆಪಿಯಲ್ಲಿ ಟಿಕೆಟ್ ಕೊಡಬೇಕು ಎಂದು ಕೇಳುತ್ತಾರೆ. ಬಿಜೆಪಿ ಡೆಮಾಕ್ರಾಟಿಕ್ ಪಕ್ಷ. ಆದ್ದರಿಂದ ಇದು ತಪ್ಪು ಎನ್ನುತ್ತಿಲ್ಲ. ಆದರೆ ಮತದಾರರು ಆಲೋಚಿಸಬೇಕು. ಎಷ್ಟೋ ಕಾರ್ಯಕರ್ತರು ಪಕ್ಷಕ್ಕಾಗಿ ಪ್ರಾಣ ನೀಡಿದ್ದಾರೆ. ನಾಯಕರು ಶ್ರಮ ವಹಿಸಿದ್ದಾರೆ. ಶಾಸಕ ಸಂಜೀವ ಮಠಂದೂರು ಅಂತಹ ಶಾಸಕರು ಬಹಳ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅದು ವ್ಯರ್ಥವಾಗದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿಕೊಂಡರು.