ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಸ್ಪಷ್ಟ ಬಹುಮತದ ಜೊತೆಗೆ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಈ ಹಿನ್ನೆಲೆ ತಮಿಳುನಾಡಿನ ಬಿಜೆಪಿ (BJP) ಅಧ್ಯಕ್ಷ ಅಣ್ಣಾಮಲೈ ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಜನಾದೇಶವನ್ನು ಪಡೆದಿದೆ. ಜನರಿಗೆ ಅವರು ನೀಡಿದ ಭರವಸೆಗಳನ್ನು ಈಡೇರಿಸಲಿ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಬಿಜೆಪಿಯನ್ನು ಬೆಂಬಲಿಸಿ ಮತ ನೀಡಿದ ಜನರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಮುಂಬರುವ ದಿನಗಳಲ್ಲಿ ಬಿಜೆಪಿ ಪುಟಿದೇಳಲಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಅಣ್ಣಾಮಲೈ (Annamalai) ಅವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಪ್ರಚಾರದ ವೇಳೆ ಬಿಜೆಪಿ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದರು. ಆದರೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದು ಬಹುಮತ ಗಳಿಸಿದೆ. ಬಿಜೆಪಿಗೆ 65 ಸ್ಥಾನಗಳು ಮಾತ್ರ ಲಭಿಸಿವೆ.