ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನದಿಂದ ಕೆಳಗಿಳಿದಿದ್ದಾರೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ, ಅಣ್ಣಾಮಲೈಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಮಟ್ಟದ ಪಾತ್ರ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ.
ಕೆ ಅಣ್ಣಾಮಲೈ ಅವರ ಸಂಘಟನಾ ಕೌಶಲ್ಯವನ್ನು ಪಕ್ಷವು ರಾಷ್ಟ್ರೀಯ ಮಟ್ಟದಲ್ಲಿ ಬಳಸಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಚೆನ್ನೈನಲ್ಲಿ ಎಐಎಡಿಎಂಕೆಯ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಾ, 2026 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎನ್ಡಿಎ ಮೈತ್ರಿಕೂಟದಡಿಯಲ್ಲಿ ತಮಿಳುನಾಡಿನಲ್ಲಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.
ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ನೈನಾರ್ ನಾಗೇಂತಿರನ್ ಅವರು ನಿರ್ಗಮಿತ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಂದ ಪಕ್ಷದ ಮುಂದಿನ ರಾಜ್ಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಿಂದೆ ಎಐಎಡಿಎಂಕೆಯಲ್ಲಿದ್ದ ನಾಗೇಂತಿರನ್ ಅವರು ಈ ಹುದ್ದೆಗೆ ಏಕೈಕ ನಾಮನಿರ್ದೇಶಿತರಾಗಿದ್ದರು. ಅವರ ನೇಮಕಾತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿಕೆಯಲ್ಲಿ ದೃಢಪಡಿಸಿದ್ದಾರೆ.
ಅಷ್ಟೇ ಅಲ್ಲದೆ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ, ಶ್ರೀ @annamalai_k ಜಿ ಅವರು ಶ್ಲಾಘನೀಯ ಸಾಧನೆಗಳನ್ನು ಮಾಡಿದ್ದಾರೆ. ಪ್ರಧಾನಿ ಶ್ರೀ @narendramodi ಜಿ ಅವರ ನೀತಿಗಳನ್ನು ಜನರಿಗೆ ತಲುಪಿಸುವಲ್ಲಿ ಅಥವಾ ಪಕ್ಷದ ಕಾರ್ಯಕ್ರಮಗಳನ್ನು ಹಳ್ಳಿಯಿಂದ ಹಳ್ಳಿಗೆ ತಲುಪಿಸುವಲ್ಲಿ, ಅಣ್ಣಾಮಲೈ ಜಿ ಅವರ ಕೊಡುಗೆ ಅಭೂತಪೂರ್ವವಾಗಿದೆ. ಪಕ್ಷದ ರಾಷ್ಟ್ರೀಯ ಚೌಕಟ್ಟಿನಲ್ಲಿ ಅಣ್ಣಾಮಲೈ ಜಿ ಅವರ ಸಂಘಟನಾ ಕೌಶಲ್ಯವನ್ನು ಬಿಜೆಪಿ ಬಳಸಿಕೊಳ್ಳುತ್ತದೆ” ಎಂದು ಅಮಿತ್ ಶಾ ಈ ಮೂಲಕ ತಿಳಿಸಿದ್ದಾರೆ.