ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ನಿರೀಕ್ಷೆ ಇದೆ. ಕೇರಳ, ತಮಿಳುನಾಡಿನಲ್ಲಿಯೂ ಈ ಬಾರಿ ಬಿಜೆಪಿ ಖಾತೆ ತೆರೆಯಲಿದೆ.
ತಮಿಳುನಾಡು ಹಲವು ದಶಕಗಳಿಂದ 2 ದ್ರಾವಿಡ ಪಕ್ಷಗಳ ಪ್ರಾಬಲ್ಯದಿಂದ ಕೂಡಿದ ರಾಜಕಾರಣವನ್ನು ಕಾಣುತ್ತಿದೆ. ಆದರೆ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡು ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿದ್ದು, ಕೆ. ಅಣ್ಣಾಮಲೈ (K Annamalai) ನಾಯಕತ್ವದಲ್ಲಿ ಬಿಜೆಪಿ ತಮಿಳುನಾಡಿಗೆ ದಾಪುಗಾಲಿಡುವುದು ಖಚಿತವಾಗಿದೆ.
ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಕೆ. ಅಣ್ಣಾಮಲೈ ಬಿಜೆಪಿ ಸೇರುವ ಮೂಲಕ ತಮಿಳುನಾಡಿನಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಗೆಲ್ಲಿಸಲು ಭಾರೀ ಪ್ರಚಾರ ನಡೆಸಿದ್ದರು. ತಮ್ಮ ಜವಾಬ್ದಾರಿಯನ್ನು ಚೆನ್ನಾಗಿಯೇ ನಿಭಾಯಿಸಿರುವ ಅಣ್ಣಾಮಲೈ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ತನ್ನ ಖಾತೆ ತೆರೆಯುವಂತೆ ಮಾಡಿದ್ದಾರೆ ಎಕ್ಸಿಟ್ ಪೋಲ್ನ ಸಮೀಕ್ಷೆ ಹೇಳುತ್ತಿದೆ.
ಈ ಬಾರಿ ತಮಿಳುನಾಡಿನಲ್ಲಿ ಬಿಜೆಪಿ 1-3 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ತಿಳಿಸಿದೆ. ಇಂಡಿಯ ಬ್ಲಾಕ್‌ಗೆ 26-30 ಸ್ಥಾನಗಳು ಸಿಗಲಿದೆ ಎಂದು ಹೇಳಿದೆ. ಇಂಡಿಯಾ ಟಿವಿ-ಸಿಎನ್‌ಎಕ್ಸ್ ಎಕ್ಸಿಟ್ ಪೋಲ್ ಸಮೀಕ್ಷೆ ಈ ಬಾರಿ ತಮಿಳುನಾಡಿನಲ್ಲಿ ಬಿಜೆಪಿ 5 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿದೆ. ಜನ್ ಕಿ ಬಾತ್ ಎಕ್ಸಿಟ್ ಪೋಲ್ ಎನ್ಡಿಎ ಮೈತ್ರಿಕೂಟಕ್ಕೆ 5 ಸ್ಥಾನಗಳು ಸಿಗುತ್ತವೆ ಎಂದು ಹೇಳಿದೆ.
ಎಬಿಪಿ-ಸಿವೋಟರ್ ಪ್ರಕಾರ ಡಿಎಂಕೆ-ಕಾಂಗ್ರೆಸ್ ಮೈತ್ರಿ 37 ರಿಂದ 39 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. ಬಿಜೆಪಿ 2 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ನ್ಯೂಸ್ 18 ಎಕ್ಸಿಟ್ ಪೋಲ್ ಪ್ರಕಾರ, ತಮಿಳುನಾಡಿನಲ್ಲಿ ಬಿಜೆಪಿ 1-3 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಕಾಂಗ್ರೆಸ್ 8-11 ಸ್ಥಾನಗಳನ್ನು, ಇಂಡಿಯ ಬ್ಲಾಕ್ 36-39 ಮತ್ತು ಇತರರು 0-2 ಸ್ಥಾನಗಳನ್ನು ಪಡೆದುಕೊಳ್ಳುತ್ತಾರೆ.