ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಅಷ್ಟೇ ಅಲ್ಲದೆ ಆ ಸ್ಥಾನಕ್ಕೆ ಬೇರೆಯವರನ್ನು ಅಧ್ಯಕ್ಷರನ್ನಾಗಿ ನೇಮಿಸಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ, ಕೆ ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಣ್ಣಾಮಲೈಗೆ ಬಿಜೆಪಿಯ ಈ ನಿರ್ಧಾರವನ್ನು ತಿಳಿಸಲಾಗಿದೆ ಎಂದು ಹೇಳಲಾಗಿದೆ.