ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚಿಸಿದ ಅಣ್ಣಾಮಲೈ, ರೋಡ್‌ಶೋನಲ್ಲಿ ಸಾವಿರಾರು ಮಂದಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರಗಿರುವ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮಂಗಳವಾರ ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.

ದರ್ಬೆ ವೃತ್ತದಲ್ಲಿ ಆರಂಭಗೊಂಡು ಬಸ್ ನಿಲ್ದಾಣದ ತನಕ ಸಾವಿರಾರು ಮಂದಿ ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಯಿತು.

ಅಭ್ಯರ್ಥಿ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಶಾಸಕ ಗುರುರಾಜ್ ಗಂಟಿಹೊಳಿ, ಸುಲೋಚನಾ ಭಟ್ ಮೊದಲಾದವರು ತೆರೆದ ವಾಹನದಲ್ಲಿ ಪ್ರಚಾರ ನಡೆಸಿದರು.

ಬಸ್ ನಿಲ್ದಾಣದ ಬಳಿ ಮತದಾರನ್ನು ಉದ್ದೇಶಿಸಿ ಮಾತನಾಡಿದ ಕೆ.ಅಣ್ಣಾಮಲೈ ಕೇಂದ್ರ ಸರ್ಕಾರ ದೇಶದಲ್ಲಿ 11 ಕೋಟಿ ಟಾಯ್ಲೆಟ್ ನಿರ್ಮಿಸಿಕೊಟ್ಟು ಮಹತ್ವದ ಪ್ರಗತಿಯ ಕೆಲಸ ಮಾಡಿದೆ. ಆದರೆ ಕಾಂಗ್ರೆಸ್ ನವರು ಈಗಲೂ ಚೊಂಬು ಹಿಡಿದು ಯಾಕೆ ಹೋಗುತ್ತಿದ್ದಾರೆಂದು ಅರ್ಥವಾಗುತ್ತಿಲ್ಲ. ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳನ್ನು ಘೋಷಿಸುತ್ತಿದೆ. ಆದರೆ ಕಾಂಗ್ರೆಸ್ ಪಕ್ಷಕ್ಕೇ ಗ್ಯಾರಂಟಿ ಇಲ್ಲ.ವ್ಯಾರಂಟಿ ಇಲ್ಲದೆ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಘೋಷಿಸುತ್ತಿದೆ. ಮೋದಿಯ ಗ್ಯಾರಂಟಿಯ ಮುಂದೆ ಯಾವ ಗ್ಯಾರಂಟಿಯೂ ಇಲ್ಲಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!