BIG NEWS | ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಸಹಿತ ಮೂವರಿಗೆ ‘ಭಾರತ ರತ್ನ’ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ವಾರವಷ್ಟೇ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಘೋಷಣೆಯಾಗಿತ್ತು.

ಇದೀಗ ಮತ್ತೆ ಕೇಂದ್ರ ಸರ್ಕಾರ ಮೂವರಿಗೆ ಭಾರತ ರತ್ನ ಪ್ರಧಾನ ಮಾಡುವುದಾಗಿ ಘೋಷಿಸಿದೆ. ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಮಾಜಿ ಪ್ರಧಾನ ಮಂತ್ರಿಗಳಾದ ಪಿ.ವಿ. ನರಸಿಂಹ ರಾವ್, ಚೌಧರಿ ಚರಣ್ ಸಿಂಗ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ ಎಂ.ಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಗೌರವ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!