ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ಘೋಷಿಸಿದೆ.
ಸಂಡೂರು, ಚನ್ನಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ತೆರವಾಗಿರುವ ಸ್ಥಾನಗಳಿಗೆ ನವೆಂಬರ್ 13 ರಂದು ಮತದಾನ ನಡೆಯಲಿದೆ. ಇನ್ನು ನವೆಂಬರ್ 23 ರಂದು ಫಲಿತಾಂಶ ಘೋಷಣೆಯಾಗಲಿದೆ.
ಕರ್ನಾಟಕ ಉಪ ಚುನಾವಣೆ ಕುರಿತು ಗಜೆಟ್ ನೋಟಿಫಿಕೇಶನ್ ಅಕ್ಟೋಬರ್ 18ರಂದು ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರ ಪರಿಶೀಲನೆ ಅಕ್ಟೋಬರ್ 28ಕ್ಕೆ ನಡೆಯಲಿದೆ. ನಾಮಪತ್ರ ಹಿಂತೆಗೆದುಕೊಳ್ಳಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.