February 6, 2026
Friday, February 6, 2026
spot_img

ಚುನಾವಣೆಗೆ ಮುನ್ನ ಉಚಿತ ಕೊಡುಗೆ ಘೋಷಣೆ: ಮಾರ್ಚ್‌ನಲ್ಲಿ ಅರ್ಜಿಗಳ ವಿಚಾರಣೆಗೆ ಸುಪ್ರೀಂ ನಿರ್ಧಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚುನಾವಣೆಗೆ ಮುನ್ನ ಗೆಲುವಿಗಾಗಿ ರಾಜಕೀಯ ಪಕ್ಷಗಳು ಪ್ರಕಟಿಸುವ ಉಚಿತ ಕೊಡುಗೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಸಿದ್ಧ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, ಅರ್ಜಿಗಳ ವಿಚಾರಣೆಯನ್ನು ಮಾರ್ಚ್‌ನಲ್ಲಿ ವಿಚಾರಣೆ ನಡೆಸಲು ನಿರ್ಧರಿಸಿದೆ.

ಹಲವಾರು ರಾಜ್ಯ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು, ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯನ್ನು (PIL) ಸಲ್ಲಿಸಿ ತುರ್ತಾಗಿ ವಿಚಾರಣೆ ನಡೆಸಬೇಕೆಂದು ಕೋರಿದರು.

ಈ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾ. ಜೋಯ್ಮಲ್ಯ ಬಾಗ್ಚಿ ನೇತೃತ್ವದ ಪೀಠವು, ಇದು ಪ್ರಮುಖ ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿದೆ ಮತ್ತು ಮೂವರು ನ್ಯಾಯಾಧೀಶರ ಪೀಠವು ವಿಚಾರಣೆ ನಡೆಸಬೇಕು ಎಂದು ಹೇಳಿದೆ.

ಅರ್ಜಿಯಲ್ಲಿ ಏನಿದೆ?
ಮುಂದೆ 5 ವಿಧಾನಸಭಾ ಚುನಾವಣೆಗಳು ಬರಲಿವೆ. ಉಚಿತ ಘೋಷಣೆಗಳು ಭ್ರಷ್ಟ ಪದ್ದತಿಗಳಾಗಿದ್ದು ಇದು ರಾಜ್ಯದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಸೂರ್ಯ, ಚಂದ್ರನನ್ನು ಬಿಟ್ಟು ಉಳಿದೆಲ್ಲವನ್ನೂ ಕೊಡುವುದಾಗಿ ಪಕ್ಷಗಳು ಭರವಸೆ ನೀಡುತ್ತವೆ. ಇದು ಸಂವಿಧಾನಕ್ಕೂ ಹಾನಿಯುಂಟುಮಾಡುತ್ತದೆ. ಹೀಗಾಗಿ ಚುನಾವಣಾ ಪ್ರಣಾಳಿಕೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಮತ್ತು ಮತ್ತು ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡುವಂತೆ ಕೋರಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !